ಕ್ರೈಂ

ಅಕ್ರಮ ಮರಳುಗಾರಿಕೆಗೆ ಸಹಕಾರ- ಕಾಪು ಎಸ್ಸೈ ಖಾದರ್ ಅಮಾನತು

ಕಾಪು ವರದಿ

ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್ ಅಮಾನತುಗೊಂಡಿದ್ದಾರೆ.
ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು‌ ದಾಖಲಾಗಿತ್ತು. ನಂತರ ಈ ಪ್ರಕರಣಕ್ಕೆ ಸಂಬಂಧಿಸಿ
ಜಿಲ್ಲಾ ಎಸ್ಪಿ ಡಾ.ಅರುಣ್ ಕುಮಾರ್ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದರು.
ಆದರೆ ಅಕ್ರಮ ಮರಳುಗಾರಿಕೆ ನಡೆಸಲು ಕಾಪು ಠಾಣಾಧಿಕಾರಿಯವರು ಸಹಕರಿಸಿದ್ದಾರೆ ಎಂಬುದನ್ನು ತಿಳಿಸುವ ಆಡಿಯೋವೊಂದು ಎಸ್ಪಿ ಡಾ.ಅರುಣ್ ಅವರಿಗೆ ಲಭಿಸಿದ್ದು, ಈ ಆಡಿಯೋವನ್ನು ಕಾರ್ಕಳ ಡಿವೈಎಸ್ಪಿ ಅರವಿಂದ್ ಕಲ್ಲುಗುಜ್ಜಿಯವರ ಮೂಲಕ ವಿಚಾರಣೆ ನಡೆಸಿದ್ದಾರೆ. ಡಿವೈಎಸ್ಪಿಯವರ ವರದಿಯಲ್ಲಿ ಕಾಪು ಠಾಣಾಧಿಕಾರಿ ವಿರುದ್ದದ ಆರೋಪವು ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆಯಲ್ಲಿ ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಎಸ್ಪಿ ಡಾ.ಅರುಣ್, ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆಯಲ್ಲಿ ಕಾನೂನು ಉಲ್ಲಂಘನೆಯಾಗಿದ್ದು, ಅಧಿಕಾರಿ ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

Leave a comment

Your email address will not be published. Required fields are marked *

You may also like

ಉಡುಪಿ ಕ್ರೈಂ

ಅಕ್ರಮ ಮರಳು ಸಾಗಾಟ ಮರಳು ಸಹಿತ ಟಿಪ್ಪರ್ ವಶಕ್ಕೆ

  • September 26, 2024
Share this… Whatsapp Facebook Twitter ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೃಹತ್ ಟಿಪ್ಪರಲ್ಲಿ ಅಕ್ರಮ ಮರಳು ಪತ್ತೆಯಾಗಿದ್ದು ಪಡುಬಿದ್ರಿ ಪೊಲೀಸರು ಮರಳು ಸಹಿತ ಟಿಪ್ಪರನ್ನು
ಕ್ರೈಂ

ಕೊಳೆತ ಸ್ಥಿತಿಯಲ್ಲಿ ಗಂಡಸಿನ ಶವ ಪತ್ತೆ

  • November 12, 2024
Share this… Whatsapp Facebook Twitter ಪಡುಬಿದ್ರಿ ಠಾಣಾ ವ್ಯಾಪ್ತಿಯ ಎಲ್ಲೂರು ಸಮೀಪದ ಇರಂದಾಡಿ ಬಸ್ ತಂಗುದಾಣದ ಹಿಂಭಾಗದಲ್ಲಿ ಗಂಡಸಿನ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು