ಅ.15ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉಡುಪಿಗೆ
‘ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ’ದಲ್ಲಿ ಭಾಗಿ : ಕಿಶೋರ್ ಕುಮಾರ್ ಕುಂದಾಪುರ
ಅ.21ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿಗಳ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ‘ಜನಪ್ರತಿನಿಧಿಗಳ ಸಮಾವೇಶ’ವು ನಾಳೆ ಅ.15 ಮಂಗಳವಾರ ಮಧ್ಯಾಹ್ನ ಗಂಟೆ 3.00ಕ್ಕೆ ಉಡುಪಿ-ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್, ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯ ಡಾ! ಧನಂಜಯ ಸರ್ಜಿ ಹಾಗೂ ಪಕ್ಷದ ಪ್ರಮುಖರು, ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಅಪೇಕ್ಷಿತರು ಪಾಲ್ಗೊಳ್ಳಲಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.