ಇನ್ನಾ ಪ್ರತಿಭಟನಾ ಸ್ಥಳಕ್ಕೆ ಬಂದ ಶಾಸಕ ಮಂಜುನಾಥ ಭಂಡಾರಿಯಿಂದ ಭರವಸೆ ನುಡಿ
ಪಡುಬಿದ್ರಿ ವರದಿ
ಕಾರ್ಕಳ ತಾಲೂಕಿನ ಇನ್ನಾ ಗ್ರಾಮದಲ್ಲಿ ಟವರ್ ನಿರ್ಮಾಣ ವಿರೋದಿ ಹೋರಾಟ ಸಮಿತಿ ನೇತೃತ್ವದಲ್ಲಿ ಗ್ರಾಮಸ್ಥರಿಂದ ನಿರಂತರವಾಗಿ ಪ್ರತಿಭಟನೆ ನಡೆಯುತ್ತಿದ್ದು ಇಂದು ವಿಧಾನ ಪರಿಷತ್ ಸದಸ್ಯರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಮಂಜುನಾಥ ಭಂಡಾರಿಯವರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾ ನಿರತರಾಗಿರುವ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಇತ್ಯಾರ್ಥಕ್ಕೆ ನನ್ನಿಂದಾದ ಪ್ರಮಾಣಿಕ ಪ್ರಯತ್ನ ನಡೆಸುವ ಭರವಸೆ ವ್ಯಕ್ತ ಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರತಿಭಟನೆಯ ಮುಂದಾಳತ್ವವನ್ನು ವಹಿಸಿರುವ ಕಾರ್ಕಳ ಕಾಂಗ್ರೆಸ್ ಮುಖಂಡರಾದ ಉದಯ ಶೆಟ್ಟಿ ಮುನಿಯಾಲು ಅವರು ಶಾಸಕ ಮಂಜುನಾಥ ಭಂಡಾರಿಯವರಿಗೆ ಅದಾನಿ ಪವರ್ ಪ್ರಾಜೆಕ್ಟ್ ಟವರ್ ನಿರ್ಮಾಣದಿಂದ ಇನ್ನಾ ಗ್ರಾಮಕ್ಕೆ ಆಗುವ ತೊಂದರೆಯನ್ನು ವಿವರಿಸಿದರು.
ಈ ಸಂದರ್ಭದಲ್ಲಿ ಇನ್ನಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜಯ.ಎಸ್.ಕೋಟ್ಯಾನ್, ಮಾಜಿ ಗ್ರಾ.ಪ. ಅಧ್ಯಕ್ಷ ಕುಶ.ಆರ್.ಮೂಲ್ಯ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಇನ್ನಾ, ಜಿಲ್ಲಾ ಮೀನುಗಾರಿಕಾ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಅಮರನಾಥ ಶೆಟ್ಟಿ, ಯೋಗೀಶ್ ಆಚಾರ್ಯ ಇನ್ನಾ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.