ಉಚ್ಚ ನ್ಯಾಯಾಲಯ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪನೆಗೆ ಐವನ್ ಒತ್ತಾಯ
ಬೆಳಗಾವಿ ಸುವರ್ಣ ಸೌಧದಲ್ಲಿ ವಿಧಾನ ಪರಿಷತ್ತಿನ ಶಾಸಕರಾದ ಐವನ್ ಡಿ ಸೋಜಾ ರವರು ವಿಧಾನ ಪರಿಷತ್ತಿನ ಕಲಾಪದಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ವ್ಯಾಪ್ತಿಗೊಳಪಡುವ ಉಚ್ಚ ನ್ಯಾಯಾಲಯ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪನೆ ಮಾಡುವಂತೆ ಸದನದ ಗಮನ ಸೆಳೆಯುವ ಸೂಚನೆಯಲ್ಲಿ ಸರ್ಕಾರಕ್ಕೆ ಒತ್ತಾಯಿಸಿದರು.