ಕನ್ನಂಗಾರ್ ಉರೂಸ್ ಸಮಿತಿ:ಅಧ್ಯಕ್ಷರಾಗಿ ಹಾಜಿ ಗುಲಾಂ ಮುಹಮ್ಮದ್ ಆಯ್ಕೆ
ಪಡುಬಿದ್ರಿ ವರದಿ
ಕನ್ನಂಗಾರ್ ಶೈಖುನಾ ಸಿರಾಜುದ್ದೀನ್ ವಲಿಯುಲ್ಲಾಹಿ ದರ್ಗಾ ಸಮಿತಿಯ ಅಧ್ಯಕ್ಷರಾಗಿ ಉದ್ಯಮಿಯೂ ಸಮಾಜ ಸೇವಕರೂ ಆದ ಹಾಜಿ ಗುಲಾಂ ಮುಹಮ್ಮದ್ ಹೆಜಮಾಡಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಹನೀಫ್ ಹಾಜಿ, ಇಬ್ರಾಹಿಂ ಸನಾ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರಕೀಬ್, ಕಾರ್ಯದರ್ಶಿಗಳಾಗಿ ಸುಲೈಮಾನ್ ನೂರಿ, ಹಮೀದ್ ಚಾಯ್ಸ್, ಕೋಶಾಧಿಕಾರಿಯಾಗಿ ಕಬೀರ್ ಹಾಜಿ ಹಾಗೂ 25 ಮಂದಿ ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.