ಕರಾವಳಿ ಕಂಬಳಕ್ಕೆ ಅನುದಾನ ನೀಡಿವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದ ಐವನ್
ವಿಧಾನ ಪರಿಷತ್ತ್ ಶಾಸಕ ಐವನ್ ಡಿ ಸೋಜಾ ರವರು ಇಂದು ಬೆಳಗಾವಿ ಸುವಣ೯ ಸೌಧದಲ್ಲಿ ವಿಧಾನ ಪರಿಷತ್ತಿನ ಕಲಾಪದಲ್ಲಿ ಕರಾವಳಿಯ ಜನಪ್ರಿಯ ಹಾಗೂ ಸಾಹಸ ಕ್ರೀಡೆ ಕಂಬಳವನ್ನು ಶಿಸ್ತು ಬದ್ಧವಾಗಿ ಸಂಘಟಿಸಲು ಪ್ರತಿ ಕಂಬಳಕ್ಕೆ ರೂ. 5 ಲಕ್ಷ ದಂತೆ ಸರ್ಕಾರದಿಂದ ಪ್ರೋತ್ಸಾಹ ಧನವನ್ನು ನೀಡುವ ಬಗ್ಗೆ ಮತ್ತು ರಾಜ್ಯ ಕಂಬಳ ಅಸೋಸಿಯೇಶನ್ ರಚನೆ ಮಾಡಿ ಕರ್ನಾಟಕ ಕ್ರೀಡಾ ಪ್ರಾಧಿಕಾರ ಮಾನ್ಯತೆ ನೀಡುವ ಬಗ್ಗೆ ಸದನದ ಶೂನ್ಯ ವೇಳೆಯಲ್ಲಿ ಮಾನ್ಯ ಸಭಾಪತಿ ರವರ ಮುಖಾಂತರ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆದರು.