ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಡಿ.ಆರ್ ರಾಜು ವಿಧಿವಶ – ಹಾಜಿ ಗುಲಾಂ ಮುಹಮ್ಮದ್ ಸಂತಾಪ
ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರು ಕಾಂಗ್ರೆಸ್ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷರು ಹಾಗೂ ರಶ್ಮಿ ಕನ್ಸಕ್ಷನ್ ಮಾಲೀಕರು ಆದ ಡಿ.ಆರ್ . ರಾಜು ಪೂಜಾರಿ ಅವರು ರಾಜಕೀಯ ಕ್ಷೇತ್ರ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಮಾಡಿದ್ದ ಅವರ ಸಾಧನೆ ಅಪಾರವಾದುದು. ಅವರ ಅಗಲುವಿಕೆ ಸಮಾಜಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ನಷ್ಟವಾಗಿದ್ದು ಅವರ ದಿವ್ಯಾತ್ಮಕ್ಕೆ ಶ್ರೀ ದೇವರು ಶಾಂತಿ ನೆಮ್ಮದಿಯನ್ನು ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ಅವರ ಅಗಲುವಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿ ಕರುಣಿಸಲಿ ಎಂದು ಕಾಂಗ್ರೆಸ್ ಮುಖಂಡ ಹಾಜಿ || ಗುಲಾಂ ಮುಹಮ್ಮದ್ ಸಂತಾಪ ವ್ಯಕ್ತಪಡಿಸಿದ್ದಾರೆ.