ಕೊಳೆತ ಸ್ಥಿತಿಯಲ್ಲಿ ಗಂಡಸಿನ ಶವ ಪತ್ತೆ
ಪಡುಬಿದ್ರಿ ಠಾಣಾ ವ್ಯಾಪ್ತಿಯ ಎಲ್ಲೂರು ಸಮೀಪದ ಇರಂದಾಡಿ ಬಸ್ ತಂಗುದಾಣದ ಹಿಂಭಾಗದಲ್ಲಿ ಗಂಡಸಿನ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸುಮಾರು ಆರು ದಿನಗಳ ಹಿಂದೆ ಈ ವ್ಯಕ್ತಿ ಮೃತ ಪಟ್ಟಿರ ಬಹುದೆಂಬುದಾಗಿ ಪೊಲೀಸರು ಸಂಶಯ ವ್ಯಕ್ತ ಪಡಿಸಿದ್ದಾರೆ.
ಸುತ್ತ ಮುತ್ತಲ ಠಾಣೆಗಳಲ್ಲಿ ದಾಖಲಾದ ನಾಪತ್ತೆ ಪ್ರಕರಣಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು, ಇದು ಆತ್ಮಹತ್ಯೆಯೊ…ಕೊಲೆಯೋ ಎಂಬ ಸಂಶಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದ್ದು, ಪೊಲೀಸ್ ತನಿಖೆಯಿಂದಷ್ಟೇ ಸತ್ಯ ಹೊರ ಬೀಳಲಿದ್ದು, ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.