ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಹಾಜಿ ಅಬುಬಕ್ಕರ್ ಐಡಿಯಲ್
ಮಂಗಳೂರು ವರದಿ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಹಾಜಿ ಅಬುಬಕ್ಕರ್ ಐಡಿಯಲ್ ಮತ್ತು ಸಂಘಟನಾ ಕಾರ್ಯದರ್ಶಿಯಾಗಿ ಇಬ್ರಾಹಿಂ ಶಾಹೀರ್ ಅಬ್ಬಾಸ್ ರವರ ನೇಮಕಾತಿ ಆದೇಶವನ್ನು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಕೆ ಕೆ ರವರಿಗೆ ಹಸ್ತಾಂತರಿಸಿದ್ದಾರೆ.
ಈ ಸಂದರ್ಭದಲ್ಲಿ ದ ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಆಲ್ವಿನ್ ಪ್ರಕಾಶ್ , ಕೋಶಾಧಿಕಾರಿ ಮೊಹಮ್ಮದ್ ಬಪ್ಪಳಿಗೆ, ಇಬ್ರಾಹಿಂ ಯು.ಪಿ, ಸಬಿತಾ ಮಿಸ್ಕಿತ್, ಸತೀಶ್ ಪೆಂಗಲ್,ಜೊರ್ಜ್ ಹಾಗೂ ಇತರರು ಉಪಸ್ಥಿತರಿದ್ದರು