ರಾಜಕೀಯ

ನಮ್ಮನ್ನು ಚುನಾವಣಾ ರಾಜಕೀಯಕ್ಕೆ ಬಳಸಿಕೊಳ್ಳಬೇಡಿ: ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್

ಅಬಕಾರಿ ಇಲಾಖೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದೆ.
ಮಹಾರಾಷ್ಟ್ರ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಕರ್ನಾಟಕದ ಮದ್ಯ ಮಾರಾಟಗಾರರಿಂದ 700 ಕೋಟಿ ಲೂಟಿ ಹೊಡೆದಿದೆ ಎಂಬ ಆರೋಪದ ಕುರಿತು ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ಹೆಗ್ಡೆ ಪ್ರತಿಕ್ರಿಯೆ ನೀಡಿದ್ದು,ಚುನಾವಣೆಗಾಗಿ ಸರ್ಕಾರಕ್ಕೆ ನಾವು ಯಾವುದೇ ಹಣ ಕೊಟ್ಟಿಲ್ಲ. ದಯವಿಟ್ಟು ಈ ವಿಚಾರವನ್ನು ಚುನಾವಣಾ ರಾಜಕೀಯಕ್ಕೆ ಬಳಸಿಕೊಳ್ಳಬೇಡಿ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ 25ನೇ ತಾರೀಕು ಪ್ರತಿಭಟನಾ ಸಭೆ ಮಾಡಿದ್ದೆವು. 3000ಕ್ಕೂ ಹೆಚ್ಚು ಜನ ಸೇರಿದ್ದೆವು. ಅಬಕಾರಿ ಅಧಿಕಾರಿಗಳು ಪ್ರಮೋಷನ್ ಗೆ ನಾವು ಹಣ ಕೊಡಬೇಕು ಎಂದು ಹೇಳಿದ್ದರು. ಹಣಕೊಟ್ಟು ಟ್ರಾನ್ಸ‌ರ್ ಮಾಡಿಕೊಳ್ಳುತ್ತಿದ್ದೇವೆ. ಆದ್ದರಿಂದ ನಮಗೆ ಜಾಸ್ತಿ ಲಂಚ ಕೊಡಿ ಎಂದು ಕೇಳುತ್ತಿದ್ದಾರೆ ಎಂದು 3000ಕ್ಕೂ ಅಧಿಕ ಸನ್ನದುದಾರರು ಈ ವಿಚಾರವನ್ನು ಪ್ರತಿಭಟನೆಯಲ್ಲಿ ಹೇಳಿದ್ದೆವು. ಅದನ್ನು ಹೊರತುಪಡಿಸಿದರೆ ನಾವು ಯಾವುದೇ ಆರೋಪ ಮಾಡಿಲ್ಲ. ನಾವು ಯಾರಿಗೂ ಚುನಾವಣೆ ರಾಜಕೀಯಕ್ಕೆ ಹಣ ಕೊಟ್ಟಿಲ್ಲ. ದಯವಿಟ್ಟು ನಮ್ಮ ಹೇಳಿಕೆಯನ್ನು ಚುನಾವಣಾ ರಾಜಕೀಯಕ್ಕೆ ಬಳಸಿಕೊಳ್ಳಬೇಡಿ ಎಂದರು.

ನಾವು ವ್ಯವಹಾರಸ್ಥರು, ನಾವ್ಯಾಕೆ ಚುನಾವಣೆಗೆ ಹಣಕೊಡಬೇಕು. ಹಿಂದಿನ ಸರಕಾರಗಳು ಇದ್ದಾಗಲೂ ನಮ್ಮ ಬೇಡಿಕೆಯನ್ನು ಮುಂದಿಟ್ಟಿದ್ದೆವು. ಆ ಸರ್ಕಾರ ಇದ್ದಾಗಲೂ ಪ್ರಮೋಷನ್ ಗೆ ಟ್ರಾನ್ಸರ್ ಗೆ ಮಂತ್ರಿಗಳು ಹಣ ತೆಗೆದುಕೊಳ್ಳುತ್ತಿದ್ದರು. 15 ವರ್ಷಗಳಿಂದ ಇದೇ ರೀತಿ ನಡೆದುಕೊಂಡು ಬರುತ್ತಿದೆ. ಈಗ ಸಮಸ್ಯೆ ಮತ್ತಷ್ಟು ಉಲ್ಬಣ ಆಗಿದೆ ಎಂದು ಬಿಜೆಪಿ ನಾಯಕರು ಮತ್ತು ಪ್ರಧಾನಿ ನರೇಂದ್ರ ಮೋದಿ ಆರೋಪಗಳಿಗೆ ತಿರುಗೇಟು ನೀಡಿದರು.

Leave a comment

Your email address will not be published. Required fields are marked *

You may also like

ರಾಜಕೀಯ ರಾಜ್ಯ

ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ

  • November 12, 2024
Share this… Whatsapp Facebook Twitter ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ
ಉಡುಪಿ ರಾಜಕೀಯ

ಉಡುಪಿ: ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್’ ಖಂಡಿಸಿ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ

  • November 12, 2024
Share this… Whatsapp Facebook Twitter ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್’ ಖಂಡಿಸಿ ಮತ್ತು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಇಂದು ಬೃಹತ್