ಪ್ರಧಾನಿಯವರು ಮೌನ ಮುರಿದು ಬಾಂಗ್ಲಾದಲ್ಲಿ ಹಿಂದುಗಳಿಗೆ ರಕ್ಷಣೆ ನೀಡಿ: ಐವನ್
ಮಂಗಳೂರು ವರದಿ
ಬಾಂಗ್ಲಾ ದೇಶದಲ್ಲಿ ಅಲ್ಪಸಂಖ್ಯಾತ ಹಿಂದುಗಳ ಮೇಲೆ ಆಗುತ್ತಿರುವ ದಾಳಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿಯಬೇಕು, ಮತ್ತು ಅವರಿಗೆ ರಕ್ಷಣೆ ನೀಡ ಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ನಿಯೋಗ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ನೀಡಿದ್ದಾರೆ.
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದುಗಳ ಮೇಲೆ ದಾಳಿಯಾಗುತ್ತಿರುವ ಬಗ್ಗೆ ನಿರಂತರ ವರದಿಯಾಗುತ್ತಿದ್ದು ಇದು ಖಂಡನೀಯ, ಅಲ್ಲಿನ ಸರ್ಕಾರ ಅಲ್ಪಸಂಖ್ಯಾತ ಹಿಂದೂಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ನಮ್ಮ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿಯವರು ಬಾಂಗ್ಲಾ ದೇಶದ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು, ಮತ್ತು ರಕ್ಷಣೆ ನೀಡುವಲ್ಲಿ ಆಗಿರುವ ವೈಫಲ್ಯತೆಯ ಬಗ್ಗೆ ಕೂಡಲೇ ತನಿಖೆ ನಡೆಸ ಬೇಕು, ಅಲ್ಲದೆ ಪ್ರಧಾನಿ ಮೋದಿಯವರು ತಕ್ಷಣವೇ ಮಣಿಪುರಕ್ಕೆ ಭೇಟಿನೀಡಿ ಅಲ್ಲಿನ ಹಿಂಸಾಚಾರವನ್ನು ತಡೆಯಬೇಕು, ಕಾನೂನು ಸುವ್ಯವಸ್ಥೆ ಕಾಪಾಡಲು ಅಸಾಧ್ಯವಾದಲ್ಲಿ ಅಲ್ಲಿನ ರಾಜ್ಯ ಸರ್ಕಾರ ವಿಸರ್ಜನೆ ಮಾಡಿ ರಾಷ್ಟ್ರಪತಿ ಆಢಳಿತ ಜಾರಿಗೆ ತರಬೇಕು ಎಂಬ ಮನವಿಯನ್ನು ಮಂಗಳೂರು ನಗರ ಬ್ಲಾಕ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಮಾಜಿ ಮೇಯರ್ ಅಶ್ರಫ್, ವಿಕಾಶ್ ಶೆಟ್ಟಿ, ಶಾಂತಲಾ ಗಟ್ಟಿ, ಮನೀಶ್ ಬೋಳಾರ್, ಸುನೀಲ್ ಬಜಿಲಕೇರಿ ಮುಂತಾದವರಿದ್ದರು.