ಕ್ರೈಂ

ಬ್ರಹ್ಮಾವರ ಲಾಕಪ್ ಡೆತ್ ಪ್ರಕರಣ: ಎಸ್ಸೈ ಸಹಿತ ಇಬ್ಬರ ಅಮಾನತು

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಎಸ್ಸೈ ಸೇರಿದಂತೆ ಇಬ್ಬರು ಪೊಲೀಸರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.

ಕೇರಳದ ಕೊಲ್ಲಂ ಮೂಲದ ಆರೋಪಿ ಬಿಜು ಮೋನು(45)ನನ್ನು ಪೊಲೀಸರು ಬ್ರಹ್ಮಾವರ ಠಾಣೆಗೆ ಕರೆದುಕೊಂಡು ಬಂದು, ಆತನ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.ಚೇರ್ಕಾಡಿ ಗ್ರಾಮದ ಮಹಿಳೆಗೆ ಕಿರುಕುಳ ನೀಡಿದ ಆರೋಪ ಬಿಜು ಮೋನು ಮೇಲಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ, ಆರೋಪಿಯನ್ನು ಬಂಧಿಸುವಾಗ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಪೂರ್ಣವಾಗಿ ಪಾಲಿಸದ ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕ ಮಧು ಬಿ.ಇ. ಮತ್ತು ಪ್ರಭಾರ ಠಾಣಾಧಿಕಾರಿಯಾಗಿರುವ ಹೆಡ್‌ಕಾನ್‌ಸ್ಟೇಬಲ್ ಸುಜಾತ ಅವರನ್ನು ಅಮಾನತು ಮಾಡಲಾಗಿದೆ ಎಂದು ಎಸ್ಪಿ ಡಾ.ಅರುಣ್ ಕೆ. ತಿಳಿಸಿದ್ದಾರೆ.
ಲಾಕಪ್‌ಡೆತ್ ಪ್ರಕರಣದ ತನಿಖೆಗಾಗಿ ಬೆಂಗಳೂರಿನ ಸಿಐಡಿ ಪೊಲೀಸರ ತಂಡ ನಿನ್ನೆಯೇ ಬ್ರಹ್ಮಾವರಕ್ಕೆ ಆಗಮಿಸಿದ್ದು ತನಿಖೆ ಚುರುಕುಗೊಳಿಸಿದೆ.

Leave a comment

Your email address will not be published. Required fields are marked *

You may also like

ಉಡುಪಿ ಕ್ರೈಂ

ಅಕ್ರಮ ಮರಳು ಸಾಗಾಟ ಮರಳು ಸಹಿತ ಟಿಪ್ಪರ್ ವಶಕ್ಕೆ

  • September 26, 2024
Share this… Whatsapp Facebook Twitter ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೃಹತ್ ಟಿಪ್ಪರಲ್ಲಿ ಅಕ್ರಮ ಮರಳು ಪತ್ತೆಯಾಗಿದ್ದು ಪಡುಬಿದ್ರಿ ಪೊಲೀಸರು ಮರಳು ಸಹಿತ ಟಿಪ್ಪರನ್ನು
ಕ್ರೈಂ

ಕೊಳೆತ ಸ್ಥಿತಿಯಲ್ಲಿ ಗಂಡಸಿನ ಶವ ಪತ್ತೆ

  • November 12, 2024
Share this… Whatsapp Facebook Twitter ಪಡುಬಿದ್ರಿ ಠಾಣಾ ವ್ಯಾಪ್ತಿಯ ಎಲ್ಲೂರು ಸಮೀಪದ ಇರಂದಾಡಿ ಬಸ್ ತಂಗುದಾಣದ ಹಿಂಭಾಗದಲ್ಲಿ ಗಂಡಸಿನ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು