ಕ್ರೈಂ

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ

ಮಂಗಳೂರು ವರದಿ

ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದ್ದು ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಅಧಿಕಾರಿ ದೂರು ದಾಖಲಿಸಿದ್ದಾರೆ.

ನವೆಂಬರ್ 30 ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೊದಲ ಬಾರಿಗೆ ಬಾಂಬ್ ಬೆದರಿಕೆ ಬಂದಿತ್ತು. ರಾಮೇಶ್ವರಂ ಕೆಫೆ ಸ್ಫೋಟದ ಮಾದರಿಯಲ್ಲಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಬಂದಿತ್ತು. ಈಗ ಬಂದಿರುವ ಇ-ಮೇಲ್ ಮೂಲಕ ಕಳುಹಿಸಲಾದ ಸಂದೇಶದಲ್ಲಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಲಾಗಿದೆ.

ಬೆಳಗ್ಗೆ 10 ಗಂಟೆಗೆ ಅಕ್ರಂ ವೈಕರ್ ಎಂಬ ಹೆಸರಿನ ಇಮೇಲ್ ಐಡಿಯಿಂದ ಇ-ಮೇಲ್ ಬಂದಿದೆ. ಡ್ರಗ್ ಕಿಂಗ್‌ಪಿನ್ ಜಾಫರ್ ಸಾಧಿಕ್ ಮತ್ತು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ಪತ್ನಿ ಕೃತಿಗಾ ಉದಯನಿಧಿ ವಿರುದ್ಧದ ಪ್ರಕರಣವನ್ನು ಹಿಂಪಡೆಯುವ0ತೆ ಒತ್ತಾಯಿಸಿದ್ದಾರೆ.

ಈಗ ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿ ಬಂಧಿಯಾಗಿರುವ ಟಿಎನ್‌ಎಲ್‌ಎ ಭಯೋತ್ಪಾದಕ ಗುಂಪಿನ ಮುಖ್ಯಸ್ಥ ಎಸ್.ಮಾರನ್ ಅವರನ್ನು ಬಿಡುಗಡೆ ಮಾಡುವಂತೆಯೂ ಇ-ಮೇಲ್ ಒತ್ತಾಯಿಸಿದೆ.

ಈ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ತಮಿಳುನಾಡು ಡಿಜಿಪಿಯ ಪುತ್ರಿ ದೌದಿ ಜೀವಾಲ್ ಅವರನ್ನು ಬಳಸಿಕೊಂಡು ಪಾಕಿಸ್ತಾನದ ಐಎಸ್‌ಐ ನಡೆಸಿದೆ ಎನ್ನಲಾದ 2006ರ ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆಯೂ ಇಮೇಲ್‌ನಲ್ಲಿ ಉಲ್ಲೇಖಗಳಿವೆ. ಅಕ್ಟೋಬರ್ 25 ರಂದು ತಿರುಪತಿಯ ಎರಡು ಪ್ರಸಿದ್ಧ ಹೋಟೆಲ್‌ಗಳಿಗೆ ಬೆದರಿಕೆ ಇಮೇಲ್ ಕಳುಹಿಸಲಾದ ಘಟನೆಯ ಬೆನ್ನಲ್ಲೇ ಮಂಗಳೂರು ವಿಮಾನ ನಿಲ್ದಾಣಕ್ಕೆ ಈ ಬಾಂಬ್ ಬೆದರಿಕೆ ಬಂದಿದೆ.

ಹಿಂದಿನ ಬೆದರಿಕೆಯಲ್ಲಿ ಜಾಫರ್ ಸಾದಿಕ್ ಮತ್ತು ಕೃತಿಗಾ ಉದಯನಿಧಿ ಹೆಸರು ಕೂಡ ಉಲ್ಲೇಖಿಸಲ್ಪಟ್ಟಿದ್ದು, ಇದಕ್ಕೆ ಕಾರಣವಾದ ವ್ಯಕ್ತಿಗಳು ತಮಿಳುನಾಡಿಗೆ ಸಂಪರ್ಕ ಹೊಂದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈ ಹಿಂದೆ ಎರಡು ಬಾರಿ ಹುಸಿ ಬಾಂಬ್ ಕರೆ ಬಂದಿರುವುದು ಸ್ಮರಿಸಬಹುದಾಗಿದೆ.

Leave a comment

Your email address will not be published. Required fields are marked *

You may also like

ಉಡುಪಿ ಕ್ರೈಂ

ಅಕ್ರಮ ಮರಳು ಸಾಗಾಟ ಮರಳು ಸಹಿತ ಟಿಪ್ಪರ್ ವಶಕ್ಕೆ

  • September 26, 2024
Share this… Whatsapp Facebook Twitter ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೃಹತ್ ಟಿಪ್ಪರಲ್ಲಿ ಅಕ್ರಮ ಮರಳು ಪತ್ತೆಯಾಗಿದ್ದು ಪಡುಬಿದ್ರಿ ಪೊಲೀಸರು ಮರಳು ಸಹಿತ ಟಿಪ್ಪರನ್ನು
ಕ್ರೈಂ

ಕೊಳೆತ ಸ್ಥಿತಿಯಲ್ಲಿ ಗಂಡಸಿನ ಶವ ಪತ್ತೆ

  • November 12, 2024
Share this… Whatsapp Facebook Twitter ಪಡುಬಿದ್ರಿ ಠಾಣಾ ವ್ಯಾಪ್ತಿಯ ಎಲ್ಲೂರು ಸಮೀಪದ ಇರಂದಾಡಿ ಬಸ್ ತಂಗುದಾಣದ ಹಿಂಭಾಗದಲ್ಲಿ ಗಂಡಸಿನ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು