ಶೃಂಗೇರಿ ಮಠದ ಶ್ರೀ ಶ್ರೀ ವಿದುಶೇಖರ ಭಾರತಿ ಸ್ವಾಮಿ : ಕಾಪು ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳಿಂದ ನವಚಂಡೀಯಾಗ ಮತ್ತು ಪ್ರತಿಷ್ಠಾ – ಬ್ರಹ್ಮಕಲಶೋತ್ಸವಕ್ಕೆ ಆಹ್ವಾನ
ಶೃಂಗೇರಿ ಮಠದ ಶ್ರೀ ಶ್ರೀ ವಿದುಶೇಖರ ಭಾರತಿ ಸ್ವಾಮಿಗಳು ಜನವರಿ 16 ರ ಬುಧವಾರ ಕುಂದಾಪುರದ ಕುಂಬಾಸಿ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ವಸತಿ ಸಂಕೀರ್ಣ ಒಂದರಲ್ಲಿ ವಾಸ್ತವ್ಯವಿದ್ದು ಈ ಸಂದರ್ಭದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್. ಕುಮಾರಗುರು ತಂತ್ರಿಯವರ ಸಮ್ಮುಖದಲ್ಲಿ ಅವರನ್ನು ಭೇಟಿಯಾಗಿ ಫೆಬ್ರವರಿ 4ರಂದು ನಡೆಯುವ ನವದುರ್ಗಾ ಲೇಖನದ ನವಚಂಡೀಯಾಗ, ಫೆಬ್ರವರಿ 25ರಿಂದ ಮಾರ್ಚ್ 5ರ ವರೆಗೆ ನಡೆಯಲಿರುವ ಪ್ರತಿಷ್ಠಾದಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಯಿತು.
ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ನವದುರ್ಗಾ ಲೇಖನ ಯಜ್ಞದ ಅಧ್ಯಕ್ಷ ಕೆ ರಘುಪತಿ ಭಟ್, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಭಗವಾನ್ ದಾಸ್ ಶೆಟ್ಟಿಗಾರ್, ವ್ಯವಸ್ಥಾಪನಾ ಸಮಿತಿಯ ಸದಸ್ಯ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮಾಧವ ಆರ್. ಪಾಲನ್ ಹಾಗೂ ಪ್ರಚಾರ ಸಮಿತಿಯ ಸಂಚಾಲಕ ರಘುರಾಮ್ ಶೆಟ್ಟಿ ಕೊಪ್ಪಲಂಗಡಿ ಉಪಸ್ಥಿತರಿದ್ದರು.