ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಕಾಪು ಮಾರಿಗುಡಿಯ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನ
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನವು ಪ್ರಥಮ ಹಂತದಲ್ಲಿ ಬಾಗಲಕೋಟೆಯ ಇಳಕಲ್ ಗ್ರಾನೈಟ್ ಶಿಲೆಯಲ್ಲಿ ರಾಜಗೋಪುರ ಸಹಿತವಾಗಿ ಸುಮಾರು 35 ಕೋಟಿ ರೂಪಾಯಿ ವೆಚ್ಚದಲ್ಲಿ ನವನಿರ್ಮಾಣಗೊಳ್ಳುತ್ತಿದ್ದು, ಕಾಮಗಾರಿ ಭರದಿಂದ ಸಾಗುತ್ತಿದೆ.
ದೇಶ ವಿದೇಶಗಳ ಭಕ್ತರ ಸಹಕಾರದಿಂದ ಇದೇ ಬರುವ ಫೆಬ್ರವರಿ 25 ರಿಂದ ಮಾರ್ಚ್ 5 ರವರೆಗೆ ಪ್ರತಿಷ್ಠಾಧಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಅತ್ಯಂತ ವಿಜೃಂಭಣೆಯಿಂದ ಜರಗಲಿದೆ.
ಮಾರ್ಚ್ 2ರಂದು ಗದ್ದುಗೆ ಪ್ರತಿಷ್ಠೆ ಮತ್ತು ಮಾರ್ಚ್ 5 ರಂದು ಬ್ರಹ್ಮಕಲಶೋತ್ಸವ ನಡೆಯಲಿದೆ .
ಜನವರಿ 19ರಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಎಚ್. ಡಿ ಕುಮಾರಸ್ವಾಮಿಯವರನ್ನು ದೇವಳದ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಮತ್ತು ಪ್ರಚಾರ ಸಮಿತಿಯ ಸಂಚಾಲಕ ಉದಯ ಶೆಟ್ಟಿ ಭಾರ್ಗವ ಮೈಸೂರಿನಲ್ಲಿ ಭೇಟಿ ಮಾಡಿ ಮನವಿಯನ್ನು ನೀಡುವ ಮೂಲಕ ಕಾಪುವಿನ ಅಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಆಹ್ವಾನಿಸಿದರು.