ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಪಡುಬಿದ್ರಿ ವರದಿ ಎರ್ಮಾಳು ಸರಕಾರಿ ಸಯುಕ್ತ ಪ್ರೌಢ ಶಾಲೆಯಲ್ಲಿ ಅದ ಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಅದಮಾರು ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆಗೊಂಡಿತು. ಅದಮಾರು ಮಠಾಧೀಶರಾದ ಹಾಗೂ ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಈಶಪ್ರಿಯ ತೀರ್ಥ ಶ್ರೀಪಾದರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಎನ್ಎಸ್ಎಸ್ ಶಿಬಿರದಲ್ಲಿ ಸ್ವಚ್ಛತೆ ಸಹಬಾಳ್ವೆ ಸಮಾಜಮುಖಿಯಾದ ಕೆಲಸ ಇದನ್ನು ಕಲಿಯುವುದಕ್ಕೆ ತುಂಬಾ ಅವಕಾಶವಿದೆ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಮುಖ್ಯ ಅತಿಥಿಯಾಗಿ […]