ಕ್ರೈಂ

ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಗೋವಾ ಮದ್ಯ ವಶ

  • November 14, 2024
  • 0 Comments

ಕಾರ್ಕಳ ತಾಲೂಕಿನ ಬೋಳ ಎಂಬಲ್ಲಿ ಅಬಕಾರಿ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಮದ್ಯದ ಬಾಕ್ಸ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ಲಕ್ಷಾಂತರ ರೂ. ಮೌಲ್ಯದ ಸುಮಾರು 260ಕ್ಕೂ ಅಧಿಕ ಮದ್ಯದ ಬಾಕ್ಸ್‌ಗಳು ಪತ್ತೆಯಾಗಿವೆ. ಅಬಕಾರಿ ಅಧಿಕಾರಿಗಳು ಅದನ್ನು ಜಪ್ತಿ ಮಾಡಿ ಕಾರ್ಕಳ ಅಬಕಾರಿ ಇಲಾಖೆಯಲ್ಲಿ ದಾಸ್ತಾನಿರಿಸಿದ್ದಾರೆ. ಇವೆಲ್ಲವೂ ಬ್ರ್ಯಾಂಡೆಡ್‌ ಮದ್ಯಗಳಾದ ಜಾನಿ ವಾಕರ್‌, ಬ್ಲಾಕ್‌ ಲೇಬಲ್‌, ಬ್ಲ್ಯಾಕ್‌ ಆಂಡ್‌ ವೈಟ್‌, ಮ್ಯಾನ್ಶನ್‌ ಹೌಸ್ (MH), ಮ್ಯಾಕ್‌ಡ್ವೆಲ್‌ (MC), ಓಡ್ಕ ಲೇಬಲ್‌ನ […]