ನಿಶ್ಚಿತಾರ್ಥವಾಗಿದ್ದ ಯುವತಿ ಆತ್ಮಹತ್ಯೆ
ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣಾ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ದೆಂದೂರುಕಟ್ಟೆ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ. ಮೃತ ಯುವತಿ ಕೀರ್ತನಾ ಮಣಿಪುರದ ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಮೂರು ವರ್ಷಗಳಿಂದ ಉದ್ಯೋಗದಲ್ಲಿದ್ದು. ಮನೆಯಲ್ಲಿ ಮದುವೆ ನಿಶ್ಚಯ ಮಾಡಿ, ಒಂದೂವರೆ ತಿಂಗಳ ಹಿಂದೆ ನಿಶ್ಚಿತಾರ್ಥವನ್ನು ಮಾಡಿದ್ದರು. ಮುಂದಿನ ಕೆಲವು ದಿನಗಳಲ್ಲಿ ಯುವತಿಗೆ ಮದುವೆ ಮಾಡುವುದಕ್ಕೆ ಮನೆಯಲ್ಲಿ ಸಿದ್ಧತೆಯನ್ನೂ ಮಾಡಿಕೊಂಡಿದ್ದರು. ಆದರೆ ಯುವತಿ ಮನೆಯ ಕೋಣೆಯಲ್ಲಿ ಕುತ್ತಿಗೆಗೆ […]